Saturday, January 9, 2021

ಶಿಕ್ಷಣ ಸಚಿವರಾದ ಸುರೇಶಕುಮಾರ

 *ನಮ್ಮ ಶಿಕ್ಷಣ ಇಲಾಖೆ, ಆಕಾಶವಾಣಿ ಮೂಲಕ ನಾಳೆಯಿಂದ ಒಂದು ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.*


*ಕಾರ್ಯಕ್ರಮದ ಹೆಸರು  "ಕಲಿಯುತ್ತಾ ನಲಿಯೋಣ".*


*ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ  (ಆದರೆ ಶಾಲೆಗೆ ಹೋಗಲಾರದ)  ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ನಾಳೆಯಿಂದ ಅಂದರೆ ಜನವರಿ 11ರಿಂದ ಏಪ್ರಿಲ್ 5  ರ ವರೆಗೆ  ಆಕಾಶವಾಣಿ ಪ್ರಸಾರ ಮಾಡಲಿದೆ. (ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ)*


*ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು,  ಕಥೆ, ನಾಟಕ, ಸಂಭಾಷಣೆ, ಒಗಟು,  ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ನಮ್ಮ ಈ ಪ್ರಯತ್ನ.*


*ಈ ಕಾರ್ಯಕ್ರಮಗಳ ಮೂಲಕ ನಲಿ - ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ... ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸುವ ಪ್ರಯತ್ನವಿದು.*


*ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ನನ್ನ ಮನವಿ.*


*ಮತ್ತು ಅಲ್ಲಿ ಪ್ರಸಾರಗೊಳ್ಳುವ  ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ.*


*ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ whatsapp  ನಂಬರ್  9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು.*


*ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ.*


*ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ.*


*ಜೊತೆಗೆ ಈ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನೂ ವಾಟ್ಸಪ್ ಮೂಲಕ ತಿಳಿಸಲು ಅವಕಾಶವಿರುತ್ತದೆ.*


*✍🏻✍🏻 ಸನ್ಮಾನ್ಯ ಶ್ರೀ ಸುರೇಶಕುಮಾರ ಎಸ್*

*ಸಚಿವರು*

No comments:

Happy republic day 2024