Monday, January 11, 2021
Sunday, January 10, 2021
Saturday, January 9, 2021
ಶಿಕ್ಷಣ ಸಚಿವರಾದ ಸುರೇಶಕುಮಾರ
*ನಮ್ಮ ಶಿಕ್ಷಣ ಇಲಾಖೆ, ಆಕಾಶವಾಣಿ ಮೂಲಕ ನಾಳೆಯಿಂದ ಒಂದು ಹೊಸ ಕಾರ್ಯಕ್ರಮವನ್ನು ಪ್ರಾರಂಭಿಸುತ್ತಿದೆ.*
*ಕಾರ್ಯಕ್ರಮದ ಹೆಸರು "ಕಲಿಯುತ್ತಾ ನಲಿಯೋಣ".*
*ಒಂದನೇ ತರಗತಿಯಿಂದ ನಾಲ್ಕನೇ ತರಗತಿಯವರೆಗೆ ಇರುವ (ಆದರೆ ಶಾಲೆಗೆ ಹೋಗಲಾರದ) ಮಕ್ಕಳಿಗಾಗಿ ಇರುವ ನಲಿಕಲಿ ಮತ್ತು ಕಲಿನಲಿ ಕಾರ್ಯಕ್ರಮಗಳನ್ನು ನಾಳೆಯಿಂದ ಅಂದರೆ ಜನವರಿ 11ರಿಂದ ಏಪ್ರಿಲ್ 5 ರ ವರೆಗೆ ಆಕಾಶವಾಣಿ ಪ್ರಸಾರ ಮಾಡಲಿದೆ. (ಪ್ರತಿ ವಾರ ಸೋಮವಾರದಿಂದ ಶುಕ್ರವಾರದವರೆಗೂ)*
*ಪ್ರತಿನಿತ್ಯ ಬೆಳಿಗ್ಗೆ 10 ಗಂಟೆಯಿಂದ 10.15 ರ ವರೆಗೆ ಒಂದು ಮತ್ತು ಎರಡನೇ ತರಗತಿಗಳಿಗಾಗಿ ಹಾಗೂ 10:15 ರಿಂದ 10.30 ಗಂಟೆಯವರೆಗೂ 3 ಮತ್ತು 4ನೇ ತರಗತಿ ಗಳಿಗಾಗಿ ಹಾಡು, ಕಥೆ, ನಾಟಕ, ಸಂಭಾಷಣೆ, ಒಗಟು, ಮತ್ತು ವಿವಿಧ ಆಸಕ್ತಿಕರ ಕಾರ್ಯಕ್ರಮಗಳ ಮೂಲಕ ಆಯಾ ತರಗತಿಗಳ ಮಕ್ಕಳ ಕಲಿಕೆ ಮುಂದುವರಿಯುವಂತೆ ಮಾಡಲು ನಮ್ಮ ಈ ಪ್ರಯತ್ನ.*
*ಈ ಕಾರ್ಯಕ್ರಮಗಳ ಮೂಲಕ ನಲಿ - ಕಲಿಯ ಆಶಯಗಳಾದ ಆಲಿಸುವಿಕೆ, ವಸ್ತು ಗುರುತಿಸುವಿಕೆ, ಸ್ವ ಕಲಿಕೆ, ಸಂತಸದಾಯಕ ಕಲಿಕೆ, ಶಬ್ದ ಪರಿಚಯ... ಹೀಗೆ ಶಬ್ದಗಳ ಏರಿಳಿತದ ಮೂಲಕ ವಿಷಯಗಳನ್ನು ವಿನೂತನ ಮಾದರಿಯಲ್ಲಿ ತಿಳಿಸುವ ಪ್ರಯತ್ನವಿದು.*
*ಒಂದರಿಂದ ನಾಲ್ಕನೇ ತರಗತಿಯವರೆಗೆ ಓದುತ್ತಿರುವ ಮಕ್ಕಳ ಎಲ್ಲಾ ಪೋಷಕರಿಗೆ ಈ ಕಾರ್ಯಕ್ರಮವನ್ನು ಮಕ್ಕಳೊಂದಿಗೆ ಆಲಿಸಬೇಕೆಂದು ನನ್ನ ಮನವಿ.*
*ಮತ್ತು ಅಲ್ಲಿ ಪ್ರಸಾರಗೊಳ್ಳುವ ಹಾಡು, ಕಥೆ ಇತ್ಯಾದಿಗಳನ್ನು ನಿಮ್ಮ ಮಕ್ಕಳಿಗೆ ಮತ್ತೊಮ್ಮೆ ಹೇಳುವುದರ ಮೂಲಕ ಹೇಳಿಸುವ ಮೂಲಕ ಮಕ್ಕಳಿಗೆ ನಲಿಯುವುದರ ಜೊತೆಗೆ ಕಲಿಯುವುದನ್ನು ಅಭ್ಯಾಸ ಮಾಡಿಸಿ.*
*ತಮ್ಮ ಮಕ್ಕಳಿಂದ ಯಾವುದಾದರೂ ಕತೆ ಹಾಡು ಒಗಟು ಹೇಳಬಹುದಾದರೆ whatsapp ನಂಬರ್ 9449417612 ಗೆ ಕಳಿಸಿದರೆ ಅದನ್ನು ಪ್ರಸಾರ ಮಾಡಲಾಗುವುದು.*
*ಈ ಕಾರ್ಯಕ್ರಮ ರಾಜ್ಯದ 13 ಆಕಾಶವಾಣಿ ಕೇಂದ್ರಗಳಿಂದ ಪ್ರಸಾರವಾಗುತ್ತದೆ. ಮತ್ತು ನಂತರ ಈ ಕಾರ್ಯಕ್ರಮಗಳು ಯೂಟ್ಯೂಬ್ ನಲ್ಲಿ ಸಹ ಲಭ್ಯವಿರುತ್ತವೆ.*
*ಈ ಎಳೆ ಕಂದಗಳ ಮನಸ್ಸುಗಳನ್ನು ವಿಕಸನಗೊಳಿಸುವ ಉದ್ದೇಶದಿಂದ ಪ್ರಾರಂಭಿಸಲಾಗುತ್ತಿರುವ ಈ ಕಾರ್ಯಕ್ರಮಕ್ಕೆ ತಮ್ಮೆಲ್ಲರ ಪ್ರೋತ್ಸಾಹವಿರಲಿ.*
*ಜೊತೆಗೆ ಈ ಕಾರ್ಯಕ್ರಮಗಳ ಬಗ್ಗೆ ತಮ್ಮ ಅಭಿಪ್ರಾಯ ಮತ್ತು ಸಲಹೆಗಳನ್ನೂ ವಾಟ್ಸಪ್ ಮೂಲಕ ತಿಳಿಸಲು ಅವಕಾಶವಿರುತ್ತದೆ.*
*✍🏻✍🏻 ಸನ್ಮಾನ್ಯ ಶ್ರೀ ಸುರೇಶಕುಮಾರ ಎಸ್*
*ಸಚಿವರು*
Thursday, January 7, 2021
-
🌹🌹🌹🌹🌹🌹🌹🌹 🎉ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು. 🎉 ಕನಕದಾಸರು ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ ಶ್ರೀ ಕನಕದಾಸರು [ತಿಮ್ಮಪ...











