Saturday, October 15, 2022
Sunday, October 9, 2022
ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು
ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ನಾಡಿನಾದ್ಯಂತ ವಾಲ್ಮೀಕಿ ಜಯಂತಿಯನ್ನು ಈ ಭಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಮಾಯಣ ಬರೆಯಲು ಪ್ರೇರಣೆಯಾದ ಘಟನೆ ಇದೇ ನೋಡಿ.
ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ನಾಡಿನಾದ್ಯಂತ ವಾಲ್ಮೀಕಿ ಜಯಂತಿಯನ್ನು ಈ ಭಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಜಯಂತಿಯನ್ನು ಸರಳವಾಗಿ ನಡೆಸಲಾಗಿತ್ತು. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ.
ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದ್ದು, ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದರು.
ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ. ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿದ್ದು, ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ನುಡಿದಂತೆ ನಡೆದುಕೊಳ್ಳುವುದು ವಾಲ್ಮೀಕಿ ರಾಮಾಯಣದಿಂದ ತಿಳಿದು ಬರುತ್ತದೆ.
ಸಾಮಾನ್ಯ ವ್ಯಕ್ತಿಯಾಗಿದ್ದ ವಾಲ್ಮೀಕಿ ತನ್ನ ಸಾಧನಾಶೀಲತೆಯಿಂದ ಜಗತ್ತಿಗೆ ರಾಮಾಯಣದಂತಹ ಆದರ್ಶ ಗ್ರಂಥವನ್ನು ನೀಡಿ ಸಂತರಾದರು. ಇದ್ದಕ್ಕೆ ಅವರಲ್ಲಿದ್ದ ಜ್ಞಾನ ಸಂಪನ್ನತೆ, ಸಾಧನೆ ಕಾರಣ ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ.
ಇಡೀ ಮನುಕುಲದ ಅತಿಶ್ರೇಷ್ಠವಾದ ಗ್ರಂಥ ರಾಮಾಯಣ. ಎಲ್ಲಾ ಸಂದರ್ಭಗಳಲ್ಲಿಯೂ ಎಲ್ಲಾ ಯುಗಗಳಿಗೂ ಆದರ್ಶಪ್ರಾಯವಾದ ಗ್ರಂಥ ಅದು ರಾಮಾಯಣ. ವಾಲ್ಮೀಕಿ ಜಾತಿ, ಮತ, ಪಂಥವನ್ನು ಮೀರಿ
ಬೆಳೆದಿರುವ ವಿಶ್ವಜ್ಞಾನ ಸಂಪನ್ನ ಗುರು. ಆದ್ದರಿಂದ ರಾಮಾಯಣ ಎಲ್ಲಾ ದೇಶಗಳಿಗೂ ಎಲ್ಲಾ ಕಾಲಕ್ಕೂ, ಎಲ್ಲಾ ಸಮಯಗಳಿಗೂ ಅನುಗುಣವಾದ ಗ್ರಂಥ. ವಾಲ್ಮೀಕಿಯ ಸಾಧನೆ ಅಖಂಡ ಭಾರತದ ಪರಿಕಲ್ಪನೆಯನ್ನು ಹೊಂದಿದೆ. ಮಹರ್ಷಿ ವಾಲ್ಮೀಕಿ ತಮ್ಮ ಕಾಲಘಟ್ಟದಲ್ಲಿ ಇಡೀ ಭಾರತದಾದ್ಯಂತ ಸಂಚರಿಸಿ ಆ ಕಲ್ಪನೆಗಳನ್ನು ನಮ್ಮ ಮುಂದಿರಿಸಿದ್ದಾರೆ. ರಾಮಾಯಣ ಒಂದು ಆದರ್ಶ ಕಾವ್ಯ ಎಂಬುದನ್ನು ಬಹುತೇಕರು ಒಪ್ಪುತ್ತಾರೆ.
ಸಂಸ್ಕೃತದಲ್ಲಿ ವಾಲ್ಮೀಕ ಎಂದರೆ ಹುತ್ತ ಎಂಬ ಅರ್ಥವನ್ನು ಕೊಡುತ್ತದೆ. ಇವರು ಕಠಿಣ ತಪಸ್ಸನ್ನು ಮೆಚ್ಚಿ ವಾಲ್ಮೀಕಿ ಎಂಬ ಹೆಸರು ಬಂದಿದೆ. ವಾಲ್ಮೀಕಿ ತಮಸಾ ನದಿ ತೀರದಲ್ಲಿ ತನ್ನದೇ ಆದ ಒಂದು ಆಶ್ರಮ ಮಾಡಿಕೊಂಡು ತನ್ನ ಶಿಷ್ಯರೊಂದಿಗೆ ವಾಸಿಸಲು ಶುರು ಮಾಡಿದ್ದರು. ಒಂದು ದಿನ ನಾರದ ಮಹರ್ಷಿಗಳು ವಾಲ್ಮೀಕಿಯ ಆಶ್ರಮಕ್ಕೆ ಬಂದು ಶ್ರೀರಾಮ ಚರಿತ್ರೆಯ ಬಗ್ಗೆ ಸ್ವಲ್ಪ ಹೇಳಿದ್ದರಂತೆ. ಶ್ರೀರಾಮನ ಚರಿತ್ರೆಯನ್ನು ಕೇಳಿದ ವಾಲ್ಮೀಕಿಯ ಮನಸ್ಸು ಸಂಪೂರ್ಣವಾಗಿ ಕರಗಿತು. ಮನಸ್ಸಿನಲ್ಲಿ ಕರುಣೆ ತುಂಬಿತು. ಅಂದಿನಿಂದ ಮಹರ್ಷಿ ವಾಲ್ಮೀಕಿಯಾದ ಎಂದು ಹೇಳಲಾಗಿದೆ.
ರಾಮಾಯಣ ಬರೆಯಲು ಇದೇ ಪ್ರೇರಣೆ
ವಾಲ್ಮೀಕಿ ಮಹರ್ಷಿಗಳು ತಮಸಾ ನದೀತೀರದಲ್ಲಿ ಸಂತೋಷವಾಗಿ ಹಾರಾಡುತ್ತಿದ್ದ ಕ್ರೌಂಚಪಕ್ಷಿ ಜೋಡಿಯನ್ನು ನೋಡುತ್ತಿದ್ದಾಗ, ಬೇಡನೊಬ್ಬನು ಬಂದು ಬಾಣದಿಂದ ಗಂಡು ಹಕ್ಕಿಯನ್ನು ಕೊಂದು ಬಿಡುತ್ತಾನೆ. ಅದರ ಸಂಗಾತಿ ಹೆಣ್ಣು ಹಕ್ಕಿಯು ಸಂಕಟದಿಂದ ಕೂಗಲಾರಂಭಿಸುತ್ತದೆ.
ಈ ಹೃದಯ ವಿದ್ರಾವಕ ಸನ್ನಿವೇಶವನ್ನು ನೋಡಿ, ಕರುಣೆ, ದುಃಖ, ಕೋಪದಿಂದ ಮಹರ್ಷಿಗಳು ಬೇಡನನ್ನು ಶಪಿಸಿ, ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ , ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್ ಎಂದು ಶಪಿಸಿದ್ದರಂತೆ. ಇದರ ಅರ್ಥ ಅಕಾರಣವಾಗಿ ಹಕ್ಕಿಯನ್ನು ಕೊಂದ ಹೇ ಅನ್ಯಾಯಿ, ನಿನ್ನ ಪಾಪದ ಫಲವಾಗಿ ನೀ ಈ ಕೂಡಲೇ ಸಾಯಿ ಎಂದು ಶಪಿಸಿದ್ದರಂತೆ. ಇದು ರಾಮಾಯಣ ರಚನೆಗೆ ಪ್ರೇರಣೆಯಾದ ಘಟನೆಯಂತೆ
ಬ್ರಹ್ಮದೇವ ಮಹರ್ಷಿಗಳ ಆಶ್ರಮಕ್ಕೆ ಬಂದು ಇದೇ ಶ್ಲೋಕರೂಪದಲ್ಲಿ ರಾಮಾಯಣ ಕಾವ್ಯ ರಚಿಸಲು ಹೇಳುತ್ತಾರೆ. ನಾರದರು ತಮಗೆ ಸಂಗ್ರಹವಾಗಿ ಹೇಳಿದ್ದ ರಾಮನ ಕಥೆಯನ್ನು ವಾಲ್ಮೀಕಿ ಮಹರ್ಷಿಗಳು 24,000 ಶ್ಲೋಕಗಳನ್ನೊಳಗೊಂಡ ಮಹಾಕಾವ್ಯವಾಗಿ ಬರೆದರು ಎಂದು ಹೇಳಲಾಗಿದೆ
ಮುಖ್ಯ ಗುರುಗಳು
ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಬೋನಾಳSunday, September 25, 2022
Kalika chetarike all subjects 4th std
https://drive.google.com/file/d/1K2JCqF3JD6bKVZRJnsgfuDbUKVrjDVid/view?usp=drivesdk
-
🌹🌹🌹🌹🌹🌹🌹🌹 🎉ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು. 🎉 ಕನಕದಾಸರು ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ ಶ್ರೀ ಕನಕದಾಸರು [ತಿಮ್ಮಪ...














































