https://drive.google.com/file/d/1hraNvWuPIe9t4IJ5SvEJ206_Yo_Z4zCK/view?usp=drivesdk
Tuesday, November 29, 2022
Friday, November 11, 2022
ಕನಕದಾಸ ಜಯಂತಿ
ಜನನ: ಕನಕದಾಸರು ಹಾವೇರಿ ಜಿಲ್ಲೆಯ ಬಾಡ ಗ್ರಾಮದಲ್ಲಿ ೧೫೦೮ ರಲ್ಲಿ ಕುರುಬ ಗೌಡ ಜನಾಂಗಕ್ಕೆ ಸೇರಿದ ಬಚ್ಚಮ್ಮ ಮತ್ತು ಬೀರಪ್ಪನಾಯಕ ಎಂಬ ದಂಪತಿಗಳ ಮಗನಾಗಿ ಜನಿಸಿದರು.
ಸಾಧನೆ: ಕನಕದಾಸರು ಶ್ರೀ ವ್ಯಾಸರಾಯರ ಮೆಚ್ಚಿನ ಶಿಷ್ಯರು. ವ್ಯಾಸರಾಯದಿಂದ ಮಧ್ವ ತತ್ವಶಾಸ್ತ್ರವನ್ನು ಕಲಿತು ಒಪ್ಪಿಕೊಂಡ ಕನಕದಾಸರು ಉಡುಪಿ ಶ್ರೀ ಕೃಷ್ಣನ ಅನನ್ಯ ಭಕ್ತರು. ಕಾಗಿನೆಲೆಯ ಆದಿಕೇಶವನ ಭಕ್ತರಾದ ಕನಕದಾಸರು ಜಾತಿಪದ್ಧತಿಯ ತಾರತಮ್ಯಗಳನ್ನು ಅಲ್ಲಗಳೆದರು.
- ಮೋಹನತರಂಗಿಣಿ
- ನಳಚರಿತ್ರೆ
- ರಾಮಧಾನ್ಯ ಚರಿತೆ
- ಹರಿಭಕ್ತಿಸಾರ
- ಮೋಹನತರಂಗಿಣಿ
- ನೃಸಿಂಹಸ್ತವ (ಉಪಲಬ್ದವಿಲ್ಲ)
ಹೀಗೆ ನಳಚರಿತ್ರೆಯಲ್ಲಿ ಕರುಣರಸಕ್ಕೇ ಪ್ರಾಧಾನ್ಯತೆ ಇದೆ. ಇನ್ನು ನಳಚರಿತ್ರೆಯಲ್ಲಿನ ಶೃಂಗಾರರಸದ ಬಗ್ಗೆ ಹೇಳುವುದಾದರೆ ಅದು ಪ್ರೌಢಶೃಂಗಾರ ಎನ್ನಬಹುದೇನೋ? ಅಲ್ಲಿ ಮೋಹನ ತರಂಗಿಣಿಯಲ್ಲಿ ಅದು ಕಣ್ಣು ಕುಕ್ಕುವ ಶೃಂಗಾರ, ಆದರೂ ಅದು ಹುಳಿಮಾವಿನಂತೆ ಹಂಚಿ ತಿನ್ನಲಾಗದು. ಮುಕ್ತವಾಗಿ ಚರ್ಚಿಸಲಾಗದು. ನಳಚರಿತ್ರೆಯ ಶೃಂಗಾರವಾದರೆ ಮಲ್ಲಿಗೆ ಮಾವಿನ ಹಾಗೆ, ಮಧುರ ರುಚಿ, ಮಧುರ ಸುವಾಸನೆ.
ನುಡಿಗೆ ಹೇಸದ ಭಂಡ ನಿನ್ನೊಳು
ಕೊಡುವರೇ ಮಾರುತ್ತರವ
ಕಡುಜಡವಲಾ, ನಿನ್ನೊಡನೆ ಮಾತೇಕೆ?
ಹೆಣದ ಬಾಯಿಗೆ ತುತ್ತು ನೀನಹೆ
ನಿನ್ನ ಜನ್ಮ ನಿರರ್ಥಕವಲಾ ಎಲವೂ
ನೀನೆಲ್ಲಿಹೆಯೋ ನಿನ್ನಯ ಬಳಗವದು..
ಕುಲಕುಲವೆನ್ನುತಿಹರು ಕುಲವಾವುದು ಸತ್ಯ ಸುಖವುಳ್ಳ ಜನರಿಗೆ.ತೀರ್ಥವನು ಪಿಡಿದವರು ತಿರುನಾಮಧಾರಿಗಳೇಜನ್ಮ ಸಾರ್ಥಕವಿರದವರು ಭಾಗವತರಹುದೇಆವ ಕುಲವಾದರೇನು ಆವನಾದರೇನು ಆತ್ಮಭಾವವರಿತ ಮೇಲೆ .
ನೀ ಮಾಯೆಯೊಳಗೋ ನಿನ್ನೊಳು ಮಾಯೆಯೋನೀ ಮಾಯೆಯೊಳಗೊ, ನಿನ್ನೊಳು ಮಾಯೆಯೊನೀ ದೇಹದೊಳಗೊ, ನಿನ್ನೊಳು ದೇಹವೂ
ಬಯಲು ಆಲಯದೊಳಗೊ, ಆಲಯವು ಬಯಲೊಳಗೊಬಯಲು ಆಲಯವೆರಡು ನಯನದೊಳಗೊನಯನ ಬುದ್ಧಿಯೊಳಗೊ, ಬುದ್ಧಿ ನಯನದೊಳಗೊನಯನ ಬುದ್ಧಿಗಳೆರಡು ನಿನ್ನೊಳಗೊ ಹರಿಯೆ
ಸವಿಯು ಸಕ್ಕರೆಯೊಳಗೊ, ಸಕ್ಕರೆಯು ಸವಿಯೊಳಗೊಸವಿಯು ಸಕ್ಕರೆಯೆರಡು ಜಿಹ್ವೆಯೊಳಗೊಜಿಹ್ವೆ ಮನಸಿನೊಳಗೊ, ಮನಸು ಜಿಹ್ವೆಯೊಳಗೊಜಿಹ್ವೆ ಮನಸುಗಳೆರಡು ನಿನ್ನೊಳಗೊ ಹರಿಯೆ
ಕುಸುಮದೊಳು ಗಂಧವೊ, ಗಂಧದೊಳು ಕುಸುಮವೊಕುಸುಮ ಗಂಧಗಳೆರಡು ಘ್ರಾಣದೊಳಗೊಅಸಮಭವ ಕಾಗಿನೆಲೆಯಾದಿಕೇಶವರಾಯಉಸುರಲೆನ್ನಳವಲ್ಲ ಎಲ್ಲ ನಿನ್ನೊಳಗೆತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ತೊರೆದು ಜೀವಿಸಬಹುದೆ ಹರಿ ನಿನ್ನ ಚರಣಗಳ
ಬರಿದೆ ಮಾತೇಕಿನ್ನು ಅರಿತು ಪೇಳುವೆನಯ್ಯ
ಒಡಲು ಹಸಿಯಲು ಅನ್ನವಿಲ್ಲದಲೇ ಇರಬಹುದು
ಪಡೆದ ಕ್ಷೇತ್ರವ ಬಿಟ್ಟು ಹೊರಡಬಹುದು
ಮಡದಿ ಮಕ್ಕಳನೆಲ್ಲಾ ತೊಲಗಿಸಿ ಬಿಡಬಹುದು
ಕಡಲೊಡೆಯ ನಿನ್ನ ಅರೆಘಳಿಗೆ ಬಿಡಲಾಗದು /೧/
ತಾಯಿ ತಂದೆಯ ಬಿಟ್ಟು ತಪವ ಮಾಡಲೂ ಬಹುದು
ದಾಯಾದಿ ಬಂಧುಗಳ ಬಿಡಲೂ ಬಹುದು
ರಾಯ ತಾ ಮುನಿದರೆ ರಾಜ್ಯವನೇ ಬಿಡಬಹುದು
ಕಾಯಜ ಪಿತ ನಿನ್ನ ಅರೆಘಳಿಗೆ ಬಿಡಲಾಗದು /೨/
ಪ್ರಾಣವ ಪರರು ಬೇಡಿದರೆತ್ತಿ ಕೊಡಬಹುದು
ಮಾನದಲಿ ಮನವ ತಗ್ಗಿಸಬಹುದು
ಜಾಣ ನಾಯಕನಾದ ಆದಿಕೇಶವರಾಯ
ಜಾಣ ಶ್ರೀಕೃಷ್ಣಾ ನಿನ್ನ ಅರೆಘಳಿಗೆ ಬಿಡಲಾಗದು /೩/
Thursday, November 10, 2022
Saturday, October 15, 2022
Sunday, October 9, 2022
ಮಹರ್ಷಿ ವಾಲ್ಮೀಕಿ ಜಯಂತಿಯ ಶುಭಾಶಯಗಳು
ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ನಾಡಿನಾದ್ಯಂತ ವಾಲ್ಮೀಕಿ ಜಯಂತಿಯನ್ನು ಈ ಭಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ರಾಮಾಯಣ ಬರೆಯಲು ಪ್ರೇರಣೆಯಾದ ಘಟನೆ ಇದೇ ನೋಡಿ.
ಮಾನವಿಯತೆಯೇ ಧರ್ಮ ಎಂಬುದನ್ನು ಪ್ರತಿಪಾದಿಸಿದ ಮಹಾನ್ ದಾರ್ಶನಿಕ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಇಂದು. ನಾಡಿನಾದ್ಯಂತ ವಾಲ್ಮೀಕಿ ಜಯಂತಿಯನ್ನು ಈ ಭಾರಿ ಅದ್ಧೂರಿಯಾಗಿ ಆಚರಿಸಲಾಗುತ್ತಿದೆ. ಕೋವಿಡ್ ಕಾರಣದಿಂದ ಎರಡು ವರ್ಷಗಳಿಂದ ಜಯಂತಿಯನ್ನು ಸರಳವಾಗಿ ನಡೆಸಲಾಗಿತ್ತು. ಅಖಂಡ ಭಾರತ ನಿರ್ಮಾಣಕ್ಕೆ ಮಹರ್ಷಿ ವಾಲ್ಮೀಕಿ ಕೊಡುಗೆ ಅಪಾರ.
ವಾಲ್ಮೀಕಿ ಮಹರ್ಷಿ ಯಾವುದೇ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಾದವರಲ್ಲ. ಇಡೀ ವಿಶ್ವಕ್ಕೆ ರಾಮರಾಜ್ಯ ಪರಿಚಯಿಸಿದ ಕೀರ್ತಿ ಮಹರ್ಷಿ ವಾಲ್ಮೀಕಿ ಅವರದ್ದಾಗಿದ್ದು, ರಾಮಾಯಣ ಮಹಾಕಾವ್ಯ ಬರೆಯುವ ಮೂಲಕ ಸತತ ಪರಿಶ್ರಮವಿದ್ದಲ್ಲಿ ಸಾಧನೆ ಮಾಡಬಹುದು ಎಂಬುದನ್ನು ತೋರಿಸಿಕೊಟ್ಟಿದ್ದಾರೆ.
ವಿಶ್ವಕ್ಕೆ ರಾಮಾಯಣದಂತಹ ಮಹಾನ್ ಗ್ರಂಥವನ್ನು ನೀಡಿದ ಮಹರ್ಷಿ ವಾಲ್ಮೀಕಿ ಅವರು ಮಾನವ ಕುಲಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ. ಹಾಗೆಯೇ ಮಾನವಿಯತೆಯೇ ಧರ್ಮ ಎಂಬದನ್ನು ಪ್ರತಿಪಾದಿಸಿದ್ದರು.
ವಾಲ್ಮೀಕಿ ರಾಮಾಯಣ ನಿತ್ಯ ಕಥೆಯಾಗಿದೆಯೇ ಹೊರತು ಮಹಾಕಾವ್ಯವಲ್ಲ. ವಾಲ್ಮೀಕಿ ರಾಮಾಯಣ ಪ್ರತಿನಿತ್ಯ ನಡೆಯುವ ಘಟನೆಗಳಾಗಿದ್ದು, ಶಾಂತಿ, ಸಹಬಾಳ್ವೆ, ಅಹಿಂಸೆಯನ್ನು ಪ್ರತಿಪಾದಿಸಿದ್ದ ವಾಲ್ಮೀಕಿಯಿಂದ ಪಂಪ, ರನ್ನ, ಪೊನ್ನ, ಹರಿಹರ, ರಾಘವಾಂಕ ಮತ್ತಿತರ ಮಹಾನ್ ಕವಿಗಳು ಬೆಳಕಿಗೆ ಬರಲು ಕಾರಣವಾಯಿತು ಎಂದು ಹಲವರು ಅಭಿಪ್ರಾಯಪಟ್ಟಿದ್ದಾರೆ.
ಮಾನವ ಕುಲಕ್ಕೆ ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ಕೃತಿ ಉತ್ತಮ ಕೊಡುಗೆ, ಹಿಂದಿನ ಕಾಲದ ಆದರ್ಶ ಮಹನೀಯರ ಉತ್ತಮ ವಿಚಾರಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ನುಡಿದಂತೆ ನಡೆದುಕೊಳ್ಳುವುದು ವಾಲ್ಮೀಕಿ ರಾಮಾಯಣದಿಂದ ತಿಳಿದು ಬರುತ್ತದೆ.
ಸಾಮಾನ್ಯ ವ್ಯಕ್ತಿಯಾಗಿದ್ದ ವಾಲ್ಮೀಕಿ ತನ್ನ ಸಾಧನಾಶೀಲತೆಯಿಂದ ಜಗತ್ತಿಗೆ ರಾಮಾಯಣದಂತಹ ಆದರ್ಶ ಗ್ರಂಥವನ್ನು ನೀಡಿ ಸಂತರಾದರು. ಇದ್ದಕ್ಕೆ ಅವರಲ್ಲಿದ್ದ ಜ್ಞಾನ ಸಂಪನ್ನತೆ, ಸಾಧನೆ ಕಾರಣ ಎಂದು ಮತ್ತೆ ಮತ್ತೆ ಹೇಳಬೇಕಾಗಿಲ್ಲ.
ಇಡೀ ಮನುಕುಲದ ಅತಿಶ್ರೇಷ್ಠವಾದ ಗ್ರಂಥ ರಾಮಾಯಣ. ಎಲ್ಲಾ ಸಂದರ್ಭಗಳಲ್ಲಿಯೂ ಎಲ್ಲಾ ಯುಗಗಳಿಗೂ ಆದರ್ಶಪ್ರಾಯವಾದ ಗ್ರಂಥ ಅದು ರಾಮಾಯಣ. ವಾಲ್ಮೀಕಿ ಜಾತಿ, ಮತ, ಪಂಥವನ್ನು ಮೀರಿ
ಬೆಳೆದಿರುವ ವಿಶ್ವಜ್ಞಾನ ಸಂಪನ್ನ ಗುರು. ಆದ್ದರಿಂದ ರಾಮಾಯಣ ಎಲ್ಲಾ ದೇಶಗಳಿಗೂ ಎಲ್ಲಾ ಕಾಲಕ್ಕೂ, ಎಲ್ಲಾ ಸಮಯಗಳಿಗೂ ಅನುಗುಣವಾದ ಗ್ರಂಥ. ವಾಲ್ಮೀಕಿಯ ಸಾಧನೆ ಅಖಂಡ ಭಾರತದ ಪರಿಕಲ್ಪನೆಯನ್ನು ಹೊಂದಿದೆ. ಮಹರ್ಷಿ ವಾಲ್ಮೀಕಿ ತಮ್ಮ ಕಾಲಘಟ್ಟದಲ್ಲಿ ಇಡೀ ಭಾರತದಾದ್ಯಂತ ಸಂಚರಿಸಿ ಆ ಕಲ್ಪನೆಗಳನ್ನು ನಮ್ಮ ಮುಂದಿರಿಸಿದ್ದಾರೆ. ರಾಮಾಯಣ ಒಂದು ಆದರ್ಶ ಕಾವ್ಯ ಎಂಬುದನ್ನು ಬಹುತೇಕರು ಒಪ್ಪುತ್ತಾರೆ.
ಸಂಸ್ಕೃತದಲ್ಲಿ ವಾಲ್ಮೀಕ ಎಂದರೆ ಹುತ್ತ ಎಂಬ ಅರ್ಥವನ್ನು ಕೊಡುತ್ತದೆ. ಇವರು ಕಠಿಣ ತಪಸ್ಸನ್ನು ಮೆಚ್ಚಿ ವಾಲ್ಮೀಕಿ ಎಂಬ ಹೆಸರು ಬಂದಿದೆ. ವಾಲ್ಮೀಕಿ ತಮಸಾ ನದಿ ತೀರದಲ್ಲಿ ತನ್ನದೇ ಆದ ಒಂದು ಆಶ್ರಮ ಮಾಡಿಕೊಂಡು ತನ್ನ ಶಿಷ್ಯರೊಂದಿಗೆ ವಾಸಿಸಲು ಶುರು ಮಾಡಿದ್ದರು. ಒಂದು ದಿನ ನಾರದ ಮಹರ್ಷಿಗಳು ವಾಲ್ಮೀಕಿಯ ಆಶ್ರಮಕ್ಕೆ ಬಂದು ಶ್ರೀರಾಮ ಚರಿತ್ರೆಯ ಬಗ್ಗೆ ಸ್ವಲ್ಪ ಹೇಳಿದ್ದರಂತೆ. ಶ್ರೀರಾಮನ ಚರಿತ್ರೆಯನ್ನು ಕೇಳಿದ ವಾಲ್ಮೀಕಿಯ ಮನಸ್ಸು ಸಂಪೂರ್ಣವಾಗಿ ಕರಗಿತು. ಮನಸ್ಸಿನಲ್ಲಿ ಕರುಣೆ ತುಂಬಿತು. ಅಂದಿನಿಂದ ಮಹರ್ಷಿ ವಾಲ್ಮೀಕಿಯಾದ ಎಂದು ಹೇಳಲಾಗಿದೆ.
ರಾಮಾಯಣ ಬರೆಯಲು ಇದೇ ಪ್ರೇರಣೆ
ವಾಲ್ಮೀಕಿ ಮಹರ್ಷಿಗಳು ತಮಸಾ ನದೀತೀರದಲ್ಲಿ ಸಂತೋಷವಾಗಿ ಹಾರಾಡುತ್ತಿದ್ದ ಕ್ರೌಂಚಪಕ್ಷಿ ಜೋಡಿಯನ್ನು ನೋಡುತ್ತಿದ್ದಾಗ, ಬೇಡನೊಬ್ಬನು ಬಂದು ಬಾಣದಿಂದ ಗಂಡು ಹಕ್ಕಿಯನ್ನು ಕೊಂದು ಬಿಡುತ್ತಾನೆ. ಅದರ ಸಂಗಾತಿ ಹೆಣ್ಣು ಹಕ್ಕಿಯು ಸಂಕಟದಿಂದ ಕೂಗಲಾರಂಭಿಸುತ್ತದೆ.
ಈ ಹೃದಯ ವಿದ್ರಾವಕ ಸನ್ನಿವೇಶವನ್ನು ನೋಡಿ, ಕರುಣೆ, ದುಃಖ, ಕೋಪದಿಂದ ಮಹರ್ಷಿಗಳು ಬೇಡನನ್ನು ಶಪಿಸಿ, ಮಾ ನಿಷಾದ ಪ್ರತಿಷ್ಠಾಂ ತ್ವಮಗಮಃ ಶಾಶ್ವತೀಃ ಸಮಾಃ , ಯತ್ಕ್ಕ್ರೌಂಚಮಿಥುನಾದೇಕಮವಧೀಃ ಕಾಮಮೋಹಿತಮ್ ಎಂದು ಶಪಿಸಿದ್ದರಂತೆ. ಇದರ ಅರ್ಥ ಅಕಾರಣವಾಗಿ ಹಕ್ಕಿಯನ್ನು ಕೊಂದ ಹೇ ಅನ್ಯಾಯಿ, ನಿನ್ನ ಪಾಪದ ಫಲವಾಗಿ ನೀ ಈ ಕೂಡಲೇ ಸಾಯಿ ಎಂದು ಶಪಿಸಿದ್ದರಂತೆ. ಇದು ರಾಮಾಯಣ ರಚನೆಗೆ ಪ್ರೇರಣೆಯಾದ ಘಟನೆಯಂತೆ
ಬ್ರಹ್ಮದೇವ ಮಹರ್ಷಿಗಳ ಆಶ್ರಮಕ್ಕೆ ಬಂದು ಇದೇ ಶ್ಲೋಕರೂಪದಲ್ಲಿ ರಾಮಾಯಣ ಕಾವ್ಯ ರಚಿಸಲು ಹೇಳುತ್ತಾರೆ. ನಾರದರು ತಮಗೆ ಸಂಗ್ರಹವಾಗಿ ಹೇಳಿದ್ದ ರಾಮನ ಕಥೆಯನ್ನು ವಾಲ್ಮೀಕಿ ಮಹರ್ಷಿಗಳು 24,000 ಶ್ಲೋಕಗಳನ್ನೊಳಗೊಂಡ ಮಹಾಕಾವ್ಯವಾಗಿ ಬರೆದರು ಎಂದು ಹೇಳಲಾಗಿದೆ
ಮುಖ್ಯ ಗುರುಗಳು
ಸರಕಾರಿ ಮಾದರಿಯ ಪ್ರಾಥಮಿಕ ಶಾಲೆ ಬೋನಾಳ-
🌹🌹🌹🌹🌹🌹🌹🌹 🎉ಕನಕದಾಸರ ಜಯಂತಿಯ ಹಾರ್ದಿಕ ಶುಭಾಶಯಗಳು. 🎉 ಕನಕದಾಸರು ಸಂತ, ತತ್ವಜ್ಞಾನಿ, ಕವಿ, ಸಂಗೀತಗಾರ ಶ್ರೀ ಕನಕದಾಸರು [ತಿಮ್ಮಪ...




























